ಬೆಂಗಳೂರು: ಇನ್ಮುಂದೆ ಡಿಸಿಎಂ ವಿಚಾರದಲ್ಲಿ ಬಹಿರಂಗವಾಗಿ ಚರ್ಚೆ ಮಾಡಬೇಡಿ. ಇದು ಒಳ್ಳೆಯ ಬೆಳವಣಿಗೆಯೂ ಅಲ್ಲ. ತಪ್ಪು ಸಂದೇಶ ಹೋಗಲಿದೆ ಎಂದು ಖಡಕ್ ಎಚ್ಚರಿಕೆಯನ್ನು ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ ಮೂವರು ಡಿಸಿಎಂ ನೇಮಕದ ಬಗ್ಗೆ ಬಹಿರಂಗವಾಗಿ ಚರ್ಚೆ ಆರಂಭಗೊಂಡಿತ್ತು. ಕೆಲವು ಸಚಿವರು ಈ ಕುರಿತು ಹೇಳಿಕೆ ನೀಡಿದ್ದರು. ಅಲ್ಲದೆ, ದಲಿತ ಡಿಸಿಎಂ ಸೇರಿದಂತೆ ವಿವಿಧ ವಿಚಾರಗಳ ಚರ್ಚೆಗೂ ಕಾರಣವಾಗಿದ್ದರು. ಈ ಬೆನ್ನಲ್ಲೇ ಕಾಂಗ್ರೆಸ್ ರಾಷ್ಟ್ರೀಯ ಅದ್ಯಕ್ಷ ಡಿಸಿಎಂ ವಿಚಾರವಾಗಿ ಬಹಿರಂಗ ಹೇಳಿಕೆ ನೀಡದಂತೆ ಖಡಕ್ ವಾರ್ನಿಂಗ್ ನೀಡಿದ್ದಾರೆ.