ಬೆಂಗಳೂರು: ರಾಮ ಮಂದಿರ ಉದ್ಘಾಟನೆಯ ಜನವರಿ 22ರಂದು ರಾಜ್ಯದಲ್ಲಿ ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪುಣ್ಯತಿಥಿಯ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೂ ಶ್ರೀರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ಮಟ್ಟದ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ತಿಳಿಸಿದ್ದಾರೆ.
ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ ಆಗಿದ್ದೇವೆ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದು ಸಿಎಂ ಹೇಳಿದ್ದಾರೆ.