‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಒಪ್ಪಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

Prasthutha|

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -


ಈ ಕುರಿತು ಉನ್ನತ ಮಟ್ಟದ ಸಮಿತಿಗೆ ಗುರುವಾರ ಪತ್ರ ಬರೆದಿರುವ ಅವರು, ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪರಿಕಲ್ಪನೆಗೆ ತಮ್ಮ ಅಸಮ್ಮತಿಯನ್ನು ಸೂಚಿಸಿದ್ದಾರೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯು ದೇಶದ ಸಾಂವಿಧಾನಿಕ ವ್ಯವಸ್ಥೆಗಳ ಮೂಲ ರಚನೆಗೆ ವಿರುದ್ಧವಾಗಿರುತ್ತದೆ ಎಂದು ಮಮತಾ ಹೇಳಿದ್ದಾರೆ. 1952ರಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ಕೇಂದ್ರ ಮತ್ತು ರಾಜ್ಯ ಮಟ್ಟಗಳಿಗೆ ಏಕಕಾಲದಲ್ಲಿ ನಡೆಸಲಾಯಿತು. ಕೆಲವು ವರ್ಷಗಳ ಕಾಲ ಇಂತಹ ಏಕಕಾಲಿಕತೆ ಇತ್ತು. ಆದರೆ, ಅಂದಿನ ಸಹಬಾಳ್ವೆಯು ಒಡೆದು ಹೋಗಿದೆ. ನೀವು ರೂಪಿಸಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.



Join Whatsapp