ಮಂಗಳೂರು: ಕೇವಲ 6 ತಿಂಗಳಲ್ಲಿ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಿ ದಾಖಲೆ ಮೆರೆದಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕೇವಲ 6 ತಿಂಗಳ ಅವಧಿಯಲ್ಲಿ ತಮ್ಮ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸಿ ದಾಖಲೆ ಮೆರೆದಿದೆ. ಬೇರೆ ರಾಜ್ಯಗಳಲ್ಲಿ ಹೀಗೆ ಮಾಡಲು ಕನಿಷ್ಟ 2-3 ವರ್ಷಗಳಷ್ಟು ಸಮಯ ತೆಗೆದುಕೊಳ್ಳುತ್ತಾರೆ, ಅದರೆ ನಿಮಗೆ ಹೇಗೆ ಇಷ್ಟು ಕಡಿಮೆ ಸಮಯದಲ್ಲಿ ಸಾಧ್ಯವಾಯಿತು ಕೇಂದ್ರದ ಅಧಿಕಾರಿಗಳು ತನ್ನನ್ನು ಕೇಳಿದ್ದಾರೆ, ನೆರೆರಾಜ್ಯಗಳೂ ಕೇಳಿವೆ ಎಂದು ಗುಂಡೂರಾವ್ ಹೇಳಿದರು.
ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದೆ 5 ಗ್ಯಾರಂಟಿಗಳ ಅನುಷ್ಠಾನಕ್ಕೆ ತಮ್ಮ ಸರ್ಕಾರ ಪ್ರಸಕ್ತ ವರ್ಷ 32 ಸಾವಿರ ಕೋಟಿ ರೂ. ಗಳನ್ನು ತೆಗೆದಿರಿಸಿದೆ, ಮುಂದಿನ ವರ್ಷ 58 ಸಾವಿರ ಕೋಟಿ ರೂ. ಖರ್ಚಾಗಲಿದೆ ಎಂದು ಸಚಿವ ಹೇಳಿದರು.