ಶಿವಮೊಗ್ಗ: ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಮಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನಾವು ರಾಮನನ್ನು ವಿರೋಧಿಸುತ್ತಿಲ್ಲ. ರಾಮಮಂದಿರ ವಿಚಾರದಲ್ಲಿ ಬಿಜೆಪಿಯ ರಾಜಕೀಯ ವಿರೋಧಿಸುತ್ತಿದ್ದೇವೆ ಎಂದರು.
ಹೆಚ್ಡಿ ಕುಮಾರಸ್ವಾಮಿ ಹೇಳುವುದೆಲ್ಲ ಸುಳ್ಳು. ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಮೂರು ಜನ ಉಪಮುಖ್ಯಮಂತ್ರಿಗಳ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ ಎಂದು ವಾಗ್ದಾಳಿ ಮಾಡಿದರು.