ಕ್ಲಾಸ್​ಮೇಟ್‌ಗಳಿಂದ ಹತ್ಯೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿ: ಆರು ದಿನಗಳ ನಂತರ ಶವ ಪತ್ತೆ

Prasthutha|

ಜಾರ್ಖಂಡ್: ಹಜಾರಿಬಾಗ್ ಜಿಲ್ಲೆಯಲ್ಲಿ ಕಳೆದ ವಾರ 11ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಬಾವಿಯಲ್ಲಿ ಆತನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಪ್ರಸಿದ್ಧ ಆಂಗ್ಲ ಮಾಧ್ಯಮ ವಿದ್ಯಾರ್ಥಿಯನ್ನು ಆತನ ಕ್ಲಾಸ್ ಮೇಟ್‌ಗಳು ಜಗಳದ ಮಧ್ಯೆ ಕೊಂದು ಶವವನ್ನು ಇಚಕ್ ಪ್ರದೇಶದ ಬಾವಿಗೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ನಡುವಿನ ಜಗಳ ಬಗೆಹರಿಸಿಕೊಳ್ಳಲು ಜನವರಿ 6 ರಂದು ತನ್ನ ಕ್ಲಾಸ್ ಮೇಟ್ ಗಳೊಂದಿಗೆ ಹೊರಗೆ ಹೋಗಿದ್ದ ವಿದ್ಯಾರ್ಥಿ ಮನೆಗೆ ವಾಪಸ್ಸಾಗಿರಲಿಲ್ಲ ಎಂದು ಕೊರ್ರಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ನಿಶಿ ಕುಮಾರಿ ತಿಳಿಸಿದ್ದಾರೆ.

ವಿದ್ಯಾರ್ಥಿಯ ಪೋಷಕರು ಮಗ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಆರಂಭಿಸಲಾಗಿತ್ತು. ಆರು ದಿನಗಳ ನಂತರ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಆತನ ಪೋಷಕರು ಅದನ್ನು ಗುರುತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆಯ ದಾರಿ ತಪ್ಪಿಸುವ ಸಲುವಾಗಿ ಶವವನ್ನು ಬಾವಿಗೆ ಎಸೆಯಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಆತನ ಇಬ್ಬರು ಕ್ಲಾಸ್ ಮೇಟ್ ಗಳನ್ನು ಬಂಧಿಸಲಾಗಿದೆ. ಇತರ ವಿದ್ಯಾರ್ಥಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp