ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಮಾತ್ರವಲ್ಲ, ದೇಶದ ಹೆಮ್ಮೆ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಹಾಡಿಹೊಗಳಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅವರು ಕರ್ನಾಟಕದ ಹೆಮ್ಮೆ ಮಾತ್ರವಲ್ಲ, ಅವರು ಈಗ ದೇಶದ ಹೆಮ್ಮೆಯಾಗಿದ್ದಾರೆ ಎಂದು ಹೇಳಿದ್ದಾರೆ.

- Advertisement -

X ಪೋಸ್ಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್, ಈಗ ನಮ್ಮಲ್ಲಿರುವ ಅತ್ಯಂತ ಅನುಭವಿ ನಾಯಕರಲ್ಲಿ ಖರ್ಗೆ ಒಬ್ಬರು. ಇಂದು, ಅವರನ್ನು ಇಂಡಿಯಾ ಬಣದ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ. ಇದು ಅವರ ನಾಯಕತ್ವ ಮತ್ತು ದೃಷ್ಟಿಕೋನದಲ್ಲಿ ವಿಶ್ವಾಸಾರ್ಹತೆ ಮತ್ತು ನಂಬಿಕೆಯನ್ನು ತೋರಿಸುತ್ತದೆ. ಅವರಿಗೆ ನನ್ನ ಶುಭ ಹಾರೈಕೆಗಳು ಎಂದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದಂತೆ ಅವರು ಅಪಾರ ಬದ್ಧತೆ ಮತ್ತು ಸಮರ್ಪಣೆಯೊಂದಿಗೆ ‘INDI’ ಬಣವನ್ನು ಕೂಡ ಮುನ್ನಡೆಸುತ್ತಾರೆ ಎಂದು ನನಗೆ ತಿಳಿದಿದೆ ಎಂದು ಡಿಕೆಶಿ ಹೇಳಿದ್ದಾರೆ.



Join Whatsapp