ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಸದ ಅನಂತ್ ಕುಮಾರ್ ಹೆಗಡೆ ಅವಾಚ್ಯ ಪದಗಳನ್ನು ಬಳಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ಕಿಡಿಗಾರಿದ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾತ್ ಅಂಗಡಿಗೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಇವನ್ಯಾವನೋ ಪುಟಗೋಸಿ ಎಂದು ತಿವಿದಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಅನಂಕ ಕುಮಾರ ಇದನ್ನು ಇಲ್ಲಿಗೆ ನಿಲ್ಲಿಸಿದರೆ ಒಳ್ಳೆಯದು, ಇಲ್ಲ ಅಂದರೆ ನಮ್ಮ ಭಾಷೆಯಲ್ಲಿ ಹೇಳಬೇಕಾಗುತ್ತದೆ. ಉತ್ತರ ಕರ್ನಾಟಕದ ಭಾಷೆಯಲ್ಲಿ ಹೇಳಬೇಕಾಗುತ್ತದೆ. ಉತ್ತರ ಕರ್ನಾಟಕದ ಭಾಷೆ ಹೇಗಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಶಿವರಾಜ್ ತಂಗಡಗಿ ಕಿಡಿ ಕಾರಿದರು.
ಸಿಎಂ ರಾಜ್ಯದಲ್ಲಿ ಅಷ್ಟೇ ಅಲ್ಲ, ದೇಶದಲ್ಲಿ ಬೆಂಬಲಿಗರನ್ನು ಹೊಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಇವನ್ಯಾವ ಪುಟಗೋಸಿ? ಟೀಕೆ ಮಾಡಬೇಕು, ನಾವು ಮಾಡ್ತೀವಿ. ಆದರೆ ಈ ರೀತಿ ಭಾಷೆ ಬಳಸುವುದಿಲ್ಲ ಎಂದ್ ಶಿವರಾಜ್ ತಂಗಡಗಿ ಹೇಳಿದರು.
ಇದೇ ವಿಚಾರಕ್ಕೆ ಸಂಬಂಧಿಸಿ ಸಚುವ ದಿನೇಶ್ ಗುಂಡೂರಾವ್, ಅನಂತ ಕುಮಾರ ಹೆಗಡೆ ಹಿಂದೂ ಧರ್ಮಕ್ಕೆ ಕಳಂಕ ಎಂದು ಹೇಳಿದ್ದಾರೆ.