ಮುಂಬೈ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಆದರೆ ಕಾರ್ಯಕ್ರಮಗಳೆಲ್ಲಾ ಮುಗಿದ ಬಳಿಕ ಜನರ ಸಂಖ್ಯೆಯೂ ಕೊಂಚ ಕಡಿಮೆಯಾಗುತ್ತದೆ ಆಗ ದೇವರ ದರ್ಶನ ಪಡೆಯುವುದು ಸುಲಭವಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜೀವ್ ಗಾಂಧಿ ಅವರು ದೇಶದ ಪ್ರಧಾನಿಯಾಗಿದ್ದಾಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಬಿಜೆಪಿ ಮತ್ತು ಆರ್ ಎಸ್ ಎಸ್ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಹೇಳಿದ್ದಾರೆ.