ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ: 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ

Prasthutha|

ಬೆಂಗಳೂರು: ಅನಿರ್ಧಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೊಸ ಕಾನೂನನ್ನು ವಾಪಸ್ ತೆಗೆಯಬೇಕೆಂದು ಆಗ್ರಹಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ.ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ.

- Advertisement -

ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ & ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ ಹಾಗೂ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾಗಿದೆ. ಈ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ.

ಲಾರಿ ಸಂಘಟನೆಗಳ ಬೇಡಿಕೆಗಳು

  • ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತೆ ಕಲಂ 106ರ ಉಪವಿಧಿ 1ಮತ್ತು 2 ಅನ್ನು ಕೈ ಬಿಡಬೇಕು.
  • ಕರ್ನಾಟಕ ಸರಕಾರ ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲಾ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದುಹಾಕಬೇಕು.
  • EXCESS PROJECTION ವಿಧಿಸುತ್ತಿರುವ 20 ಸಾವಿರ ದಂಡವನ್ನು ಕಡಿಮೆಗೊಳಿಸಬೇಕು.
  • ಕಪ್ಪು ಪಟ್ಟಿ ಹೆಸರಿನಲ್ಲಿ ವಾಣಿಜ್ಯ ವಾಹನಗಳಿಗೆ FC ಮತ್ತು ಪರ್ಮಿಟ್ ನವೀಕರಣ ಮಾಡಿಕೊಡಲು ನಿರಾಕರಿಸುವುದನ್ನು ನಿಲ್ಲಿಸಬೇಕು.
  • DSA ಕೇಸುಗಳು ಎಲ್ಲೇ ಇದ್ದರು ಸಹ ಅದನ್ನು ವಾಹನ ಮಾಲೀಕರು ತಮ್ಮ ಮೂಲ ಕಚೇರಿಯಲ್ಲಿ ಮುಗಿಸಿಕೊಳ್ಳುವ ಅವಕಾಶ ನೀಡಬೇಕು.
  • ಪೋಲೀಸ್ ಇಲಾಖೆಯೊಂದಿಗೆ ಇಟ್ಟಿರುವ ಬೇಡಿಗಳು:
  • ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳ ನಗರ ಪ್ರವೇಶಕ್ಕೆ ದಿನದ ಕೆಲವು ಸಮಯದಲ್ಲಿ ಮಾಡಿರುವ ನಿರ್ಬಂಧವನ್ನು ಕೈಬಿಡಬೇಕು.
  • ಅಪಘಾತ ನಡೆದಾಗ ವಾಹನ ಚಾಲಕನ ಚಾಲನಾ ಪತ್ರವನ್ನು ವಶಪಡಿಸಿಕೊಳ್ಳುವುದನ್ನು ಬಿಡಬೇಕು.
  • ಅಪಘಾತ ನಡೆದ ನಂತರ ವಶಪಡಿಸಿಕೊಂಡ ವಾಹನ ಮತ್ತು ಚಾಲಕನನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು.
  • ಚಾಲಕನ ಚಾಲನಾ ಪರವಾನಿಗೆಯನ್ನು ಅಮಾನತ್ತಿನಲ್ಲಿಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆಯುವುದನ್ನು ನಿಲ್ಲಿಸಬೇಕು.
  • ಹೊರ ರಾಜ್ಯಗಳ ವಾಹನಗಳು ನಮ್ಮ ರಾಜ್ಯದಲ್ಲಿ ಅಪಘಾತಕ್ಕೆ ಈಡಾದಾಗ, ವಾಹನ ಮತ್ತು ಚಾಲಕನ ಬಿಡುಗಡೆಗೆ ಸ್ಥಳೀಯ ಭದ್ರತೆ ಮತ್ತು ಜಾಮೀನು ಕೇಳುವುದನ್ನು ನಿಲ್ಲಿಸಬೇಕು.
  • ಬ್ರೇಕ್ ಡೌನ್ ಆಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಬದಿಯಲ್ಲಿ ನಿಂತಿದ್ದರು ವಾಹನಗಳನ್ನು ವಶಪಡಿಸಿಕೊಂಡು ಕಲಂ 283 ರಡಿಯಲ್ಲಿ ಕೇಸು ದಾಖಲಿಸುವುದನ್ನು ನಿಲ್ಲಿಸಬೇಕು.


Join Whatsapp