ಬೆಂಗಳೂರು: ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ.
ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಟಪುದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಎಚ್ಕೆ ಪಾಟೀಲ್ ಹಾಗೂ ಹೆಚ್ಸಿ ಮಹಾದೇವಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿ ನ್ಯಾಯಮೂರ್ತಿ ಸದಾಶಿವ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿ ಬಗ್ಗೆ ವಿವರಿಸಿದರು.