ಕಲ್ಲಡ್ಕ ಪ್ರಭಾಕರ ಭಟ್ ಭಾಷಣವನ್ನು ಪೂರ್ತಿ ಬರಹ ರೂಪದಲ್ಲಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Prasthutha|

►ಹೈಕೋರ್ಟ್ ಕಲಾಪದಲ್ಲಿ ಪ್ರಭಾಕರ್ ಭಟ್ ದ್ವೇಷ ಭಾಷಣ ವಿಡಿಯೋ ಪ್ರದರ್ಶನಕ್ಕೆ ಅವಕಾಶ ಕೊಡಿ: ಎಸ್ ಬಾಲನ್

- Advertisement -


ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ದಾಖಲಾದ ಎಫ್ಐಆರ್ ರದ್ದುಗೊಳಿಸಬೇಕು ಮತ್ತು ವಿಚಾರಣೆಗೆ ತಡೆ ನೀಡಬೇಕು ಎಂದು ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು.

ಕಲ್ಲಡ್ಕ ಪ್ರಭಾಕರ ಭಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಂ, ಪ್ರಕರಣದ ದೂರುದಾರರು ರಾಜಕೀಯ ಕಾರ್ಯಕರ್ತೆಯಾಗಿದ್ದ್ದಾದು, ಸುಳ್ಳು ದೂರನ್ನು ಉದ್ದೇಶಪೂರ್ವಕವಾಗಿ ದಾಖಲಿಸಿದ್ದಾರೆ. ಹಾಗಾಗಿ ತಕ್ಷಣಕ್ಕೆ ತಡೆಯಾಜ್ಞೆ ನೀಡಬೇಕು' ಎಂದು ಕೋರಿಕೊಂಡರು. ಈ ಹಿಂದೆ ಸರ್ಕಾರವೇ ಹೈಕೋರ್ಟ್ ನಲ್ಲಿ ಪ್ರಭಾಕರ ಭಟ್ ಬಂಧನ ಮಾಡಲ್ಲ ಎಂದು ಹೇಳಿದೆ. ಅದರ ಅರ್ಥ, ಪೊಲೀಸರು ರಾಜಕೀಯ ಒತ್ತಡದಿಂದ ಪ್ರಕರಣ ದಾಖಲಿಸಿದ್ದಾರೆ ಎಂಬುದು ಸರ್ಕಾರಕ್ಕೆ ಮನವರಿಕೆ ಆಗಿದೆ’ ಎಂದು ವಾದ ಮಂಡಿಸಿದರು.

- Advertisement -

ದೂರುದಾರೆಯ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್ ಬಾಲನ್, “ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಅಬಿಚ್ಯುವಲ್ ಅಫೆಂಡರ್ ಆಗಿದ್ದು, ರಾಜ್ಯದೆಲ್ಲೆಡೆ ದ್ವೇಷ ಭಾಷಣ ಮಾಡಿ ಕೋಮುಗಲಭೆ ಸೃಷ್ಟಿಸಿ ಹಿಂಸಾಚಾರ ಮಾಡಿರುವ ಇತಿಹಾಸ ಆರೋಪಿಗಿದೆ. ಈವರೆಗೆ ಈತನ ವಿರುದ್ದ ದಾಖಲಾದ ದೂರುಗಳನ್ನು ಪೀಠ ತರಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು. `ಆರೋಪಿ ಪರ ವಕೀಲರು ಭಾಷಣವನ್ನು ಬರಹ ರೂಪದಲ್ಲಿ ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಆ ಕೆಲಸವನ್ನು ಸರ್ಕಾರ ಮಾಡಬೇಕೇ ಹೊರತು ಆರೋಪಿ ಪರ ವಕೀಲರಲ್ಲ. ಸರ್ಕಾರಕ್ಕೆ ಈ ನಿಟ್ಟಿನಲ್ಲಿ ನಿರ್ದೇಶನ ನೀಡಬೇಕು. ಆರೋಪಿಯ ಪೂರ್ತಿ ಭಾಷಣವನ್ನು ಕಲಾಪದಲ್ಲಿ ಕೇಳಲು ಕೋರ್ಟ್ ನಲ್ಲಿ ವಿಡಿಯೋ ಪ್ರದರ್ಶನಕ್ಕೆ ಅವಕಾಶ ಕೊಡಬೇಕು. ಆರೋಪಿಯ ಪ್ರಕರಣಕ್ಕೆ ತಡೆಯಾಜ್ಞೆ ನೀಡಬಾರದು’ ಎಂದು ವಕೀಲ ಬಾಲನ್ ಮನವಿ ಮಾಡಿದರು.

ಆರೋಪಿಯ ಭಾಷಣದ ಪೂರ್ಣಪಾಠವನ್ನು ಬರಹ ರೂಪದಲ್ಲಿ ಕೋರ್ಟ್ ಗೆ ಸಲ್ಲಿಸಿ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಸರ್ಕಾರಕ್ಕೆ ನಿರ್ದೇಶನ ನೀಡಿದರು.



Join Whatsapp