ಒಕ್ಕಲಿಗರ ಮೀಸಲಾತಿ ಕಡಿಮೆ ಮಾಡಿ ಮುಸ್ಲಿಮರಿಗೆ ಕೊಟ್ಟಿದ್ದೆ: ದೇವೇಗೌಡ

Prasthutha|

ಹಾಸನ: ಅಂದು ಒಕ್ಕಲಿಗರಿಗೆ ಕೊಡಲಾಗಿದ್ದ ಮೀಸಲಾತಿ ಪ್ರಮಾಣವನ್ನು ಕಡಿಮೆ ಮಾಡಿ, ಅದನ್ನು ಮುಸ್ಲಿಮರಿಗೆ ನಾನು ನೀಡಿದ್ದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಣಯ ಮಾಡಿ, ಕೇಂದ್ರಕ್ಕೆ ಕಳಿಸಿದೆ.ಅದನ್ನೇ ಮುಂದಿಟ್ಟುಕೊಂಡು ಈ ಚುನಾವಣೆಯಲ್ಲಿ ಹೋರಾಟ ಮಾಡುತ್ತೇವೆ. ಮೀಸಲಾತಿ ಬಗ್ಗೆ ಏನಾಗಿದೆ ಎಂಬ ಚರ್ಚೆಯಾಗಲಿ, ಅದನ್ನು ನಾನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ದೇವೇಗೌಡ ಹೇಳಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ ಮಂಡಿಸಿದ್ದರು. ಆಗ ಪ್ರತಿಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಆ ನಿರ್ಣಯದ ಪ್ರತಿಯನ್ನು ಹರಿದು ತಿಪ್ಪೇಸ್ವಾಮಿ ಅವರ ಮುಖಕ್ಕೆ ಎಸೆದಿದ್ದರು. ಆದರೆ ಇವತ್ತು ಒಳ ಮೀಸಲಾತಿ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದರು.

- Advertisement -

‘ಪರಿಶಿಷ್ಟ ಜಾತಿಗೆ ಶೇ 15, ಪರಿಶಿಷ್ಟ ಪಂಗಡಗಳಿಗೆ ಶೇ 3 ಮೀಸಲಾತಿ ಇತ್ತು. ಆದರೆ ಉದ್ಯೋಗದಲ್ಲಿ ಈ ಮೀಸಲಾತಿ ಪ್ರಮಾಣ ತಲುಪದೇ ಹೋದಾಗ, ನಾನು ಪರಿಶಿಷ್ಟ ಜಾತಿಗೆ ಶೇ 15 ರಿಂದ ಶೇ 18, ಪರಿಶಿಷ್ಟ ಪಂಗಡಕ್ಕೆ ಶೇ 3ರಿಂದ ಶೇ 5ಕ್ಕೆ ಹೆಚ್ಚಿಸಿದೆ. ಅಂದು ನಾನು ಮಾಡಿದ್ದ ಶೇ 23 ಮೀಸಲಾತಿ ಈಗಲೂ ಜಾರಿಯಲ್ಲಿದೆ. ಆದರೆ, ಅದನ್ನು ಇಷ್ಟು ದಿನ ಮರೆಮಾಚುತ್ತಲೇ ಬಂದಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರನ್ನು ಮಾಜಿ ಪಿಎಂ ಟೀಕಿಸಿದರು.



Join Whatsapp