ನಾಳೆ ರಜೆ ಘೋಷಿಸಿದ ಹಿಮಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರ

Prasthutha|

ಶಿಮ್ಲಾ: ಶ್ರೀರಾಮಜನ್ಮಭೂಮಿ ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ಹಿಮಾಚಲ ಪ್ರದೇಶ ಸರ್ಕಾರ ಒಂದು ದಿನದ ರಜೆ ಘೋಷಣೆ ಮಾಡಿದೆ ಎಂದು ವರದಿಯಾಗಿದೆ.

- Advertisement -

ಮುಖ್ಯ ಕಾರ್ಯದರ್ಶಿ ಪ್ರಬೋಧ್ ಸಕ್ಸೇನಾ ಇಂದು ಸರ್ಕಾರಿ ಆದೇಶ ಹೊರಡಿಸಿದ್ದು, ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳು, ಸರ್ಕಾರದ ಇಲಾಖೆಗಳು, ನಿಗಮ ಮಂಡಳಿಗಳಿಗೆ ರಜೆ ಘೋಷಿಸಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಅಥವಾ ವೀಕ್ಷಿಸಲು ಅನುಕೂಲವಾಗುವಂತೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.



Join Whatsapp