ದೇವಾಲಯ ಪ್ರವೇಶ ನಿರಾಕರಣೆ | ನಾನು ಯಾವ ಅಪರಾಧ ಮಾಡಿದ್ದೇನೆ: ರಾಹುಲ್ ಗಾಂಧಿ

Prasthutha|

ನಾಗಾಂವ್: ಅಸ್ಸಾಂನ ಪ್ರಸಿದ್ಧ ದೇವಸ್ಥಾನವೊಂದರಲ್ಲಿ ರಾಹುಲ್ ಗಾಂಧಿ ಪ್ರವೇಶ ನಿರಾಕರಿಸಿರುವ ಹಿನ್ನೆಲೆಯಲ್ಲಿ ನಾನು ಮಾಡಿರುವ ತಪ್ಪಾದರೂ ಏನು ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

- Advertisement -


ವಿದ್ವಾಂಸರಾದ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್ ನಲ್ಲಿರುವ ಬಟಾದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡದಂತೆ ಅಸ್ಸಾಂನ ಅಧಿಕಾರಿಗಳು ತಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಆರೋಪಿಸಿದ್ದಾರೆ.


“ನಮಗೆ ಯಾವುದೇ ಸಮಸ್ಯೆಯನ್ನು ಉಂಟು ಮಾಡುವುದು ಬೇಕಿಲ್ಲ. ನಮಗೆ ದೇವಾಲಯದಲ್ಲಿ ಪ್ರಾರ್ಥನೆ ಮಾತ್ರ ಸಲ್ಲಿಸಬೇಕಿದೆ” ಎಂದೂ ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಯಾರು ದೇವಾಲಯಕ್ಕೆ ಭೇಟಿ ನೀಡಬೇಕು ಎಂದು ನಿರ್ಧರಿಸಲಿದ್ದಾರೆ. ಕೇವಲ ಓರ್ವ ವ್ಯಕ್ತಿ ಮಾತ್ರ ದೇವಾಲಯವನ್ನು ಪ್ರವೇಶಿಸಬಹುದಾಗಿದೆ ಎಂದೂ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -


ಈ ಘಟನೆಯ ಬೆನ್ನಿಗೇ ರಾಹುಲ್ ಗಾಂಧಿ ನಾಗಾಂವ್ ನಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.



Join Whatsapp