ಲಕ್ಕೋ: ಮೊಬೈಲ್‌ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಮಗುವೊಂದು ದಿಢೀರ್ ಸಾವನ್ನಪ್ಪಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ಮೋಹಾ ಜಿಲ್ಲೆಯ ಹಸನ್‌ಪುರ ಕೊತ್ವಾಲಿಯದ ಹತ್ಯೆಖೇಡಾದಿಂದ ವರದಿಯಾಗಿದೆ.
ಹಾಸಿಗೆಯಲ್ಲಿ ಅಮ್ಮನ ಪಕ್ಕದಲ್ಲಿ ಮಲಗಿಕೊಂಡು ಮೊಬೈಲ್‌ನಲ್ಲಿ ಕಾರ್ಟೂನ್ ವೀಕ್ಷಿಸುತ್ತಿತ್ತು. ಈ ವೇಳೆ ಮಗುವಿನ ಕೈಯಿಂದ ಫೋನ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದ್ದು, ತಾಯಿ ಮಗುವನ್ನು ನೋಡಿದ್ದಾರೆ. ಅದೇ ಕ್ಷಣದಲ್ಲಿ ಮಗು ಪ್ರಜ್ಞಾಹೀನವಾಗಿ ಬಿದ್ದಿದೆ.
ಗಾಬರಿಗೊಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷಿಸಿದ ವೈದ್ಯರು, ಮಗು ಈಗಾಗಲೇ ಮೃತಪಟ್ಟಿದೆ ಎಂದು ಹೇಳಿದ್ದಾರೆ.
ಮಗು ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹಸನಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರಿ ಹೇಳಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಹಸ್ತಾಂತರಿಸುವಂತೆ ನಾವು ಕುಟುಂಬಕ್ಕೆ ಮನವಿ ಮಾಡಿದ್ದೇವೆ. ಆದರೆ ಅವರು ಒಪ್ಪಲಿಲ್ಲ. ಮಗು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆಯೇ ಎಂದು ಅಮ್ಮೋಹಾ ಮುಖ್ಯ ವೈದ್ಯಾಧಿಕಾರಿ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.