ಕಲಬುರಗಿ: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೋಮವಾರ ರಾಮ ಉತ್ಸವ ಸಮಿತಿ ಆಯೋಜಿಸಿದ್ದ ರಾಮನ ಮೂರ್ತಿಯ ಶೋಭಾಯಾತ್ರೆಯ ವೇಳೆ ಸಂಭವಿಸಿದ ಗಲಾಟೆ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಸೋಮವಾರ ತಡರಾತ್ರಿಯಿಂದಲೇ ಪಟ್ಟಣದಲ್ಲಿ ನಿಷೇದಾಜ್ಞೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಚಿತ್ತಾಪುರ ತಹಶೀಲ್ದಾರ್ ಸೈಯದ್ ಷಾವಲಿ ಅವರು ಈ ಆದೇಶ ಹೊರಡಿಸಿದ್ದಾರೆ.
ಗುಂಪೊಂದು ರೆಸ್ಟೋರೆಂಟ್ ಮುಚ್ಚದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಬಲವಂತವಾಗಿ ಮುಚ್ಚಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ.