ರಾಹುಲ್ ಗಾಂಧಿ ನ್ಯಾಯ ಯಾತ್ರೆ ಮೇಲೆ ದಾಳಿ ನ್ಯಾಯವೇ : ಸಚಿವ ಈಶ್ವರ್ ಖಂಡ್ರೆ

Prasthutha|

ಮೈಸೂರು : ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ.

- Advertisement -

ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಇಂದು ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯಲಾಗುತ್ತಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತ್ವಕ್ಕೆ ಮಾರಕವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

ರಾಹುಲ್ ಜೀ ಅವರ ನ್ಯಾಯ ಯಾತ್ರೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿ, ದಾಳಿ ಮಾಡುತ್ತಿರುವುದು ಅಕ್ಷಮ್ಯ ಎಂದರು.



Join Whatsapp