ಬೆಂಗಳೂರು: ಜನವರಿ19ರಂದು ನಡೆಯಬೇಕಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಜನವರಿ 27ಕ್ಕೆ ಮರು ನಿಗದಿ ಮಾಡಲಾಗಿದೆ. ಕೇಂದ್ರ ಸಚಿವರು ಸೇರಿದಂತೆ ವಿವಿಧ ಬಿಜೆಪಿ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜನವರಿ.19ಕ್ಕೆ ನಿಗದಿಯಾಗಿದ್ದಂತ ಕರ್ನಾಟಕ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಮುಂದೂಡಿಕೆ ಮಾಡಲಾಗಿತ್ತು. ಜನವರಿ27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಸೇರಿದಂತೆ ವಿವಿಧ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.