ಕಲಬುರಗಿ: ಕೋಟನೂರ್ (ಡಿ) ಗ್ರಾಮದ ಬಳಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಖಂಡಿಸಿ ದಲಿತ ಮುಖಂಡರು ಸಿಡಿದೆದ್ದಿದ್ದು, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಬಿಜೆಪಿ ವಿಧಾನಪರಿಷತ್ ಸದಸ್ಯ ಮಾಲೀಕತ್ವದ ಪೆಟ್ರೋಲ್ ಬಂಕ್ ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಇದರಿಂದ ಕಲಬುರಗಿ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ.
ಮಂಗಳವಾರ ಬೆಳಿಗ್ಗೆಯಿಂದ ದಲಿತ ಸಂಘಟನೆಗಳು ರಾಮ ಮಂದಿರ, ಫರತಹಬಾದ್, ಜೇವರ್ಗಿ ತಾಲ್ಲೂಕು, ತೀಮ್ಮಾಪುರಿ ಸರ್ಕಲ್ ಸೇರಿದಂತೆ ಹಲವೆಡೆ ಪ್ರತಿಭಟನೆಗಳನ್ನು ನಡೆಸಿದ್ದಾರೆ.