ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ: ಪರಮೇಶ್ವರ್

Prasthutha|

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಗೃಹ ಸಚಿವ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಹೋದ್ರೆ ಸಚಿವರಾಗಿ ಮುಂದುವದ ನೈತಿಕತೆ ಇಲ್ಲ ಎಂಬ ಸಚಿವ ರಾಜಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಹೆಚ್ಚು ಸ್ಥಾನ ಗೆಲ್ತೀವಿ ಅನ್ನೋ ವಿಶ್ವಾಸ ಇದೆ. 28ಕ್ಕೆ 28 ಗೆಲ್ಲೋಕೆ ಹೊರಟಿದ್ದೇವೆ. ಹಿಂದೆ 27 ಸ್ಥಾನ ಕಾಂಗ್ರೆಸ್ ಗೆದ್ದಿರೋದನ್ನ ನೆನಪು ಮಾಡಿಕೊಳ್ಳಬೇಕು ಎಂದರು.


ಸದ್ಯದ ವಾತಾವರಣ ಚೆನ್ನಾಗಿ ಇದೆ. ನಾವು ಗ್ಯಾರಂಟಿಗಳನ್ನ ಕೊಟ್ಟಿದ್ದೇವೆ. ಜನಪರ ಸರ್ಕಾರ ಇದೆ. ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ. ನಾವು ಹೆಚ್ಚು ಸ್ಥಾನ ಗೆಲ್ತೀವಿ ಎಂದರು.



Join Whatsapp