ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ ಎಂದು ಆಮ್ ಆದ್ಮಿ ಪಕ್ಷ (AAP) ಹೇಳಿದೆ.
ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಪಂಜಾಬ್ ನ 13 ಲೋಕಸಭಾ ಕ್ಷೇತ್ರಗಳಿಗೆ 40 ಅಭ್ಯರ್ಥಿಗಳ ಪಟ್ಟಿಯನ್ನು ಆಪ್ ತಯಾರಿಸಿದೆ, ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ಮುನ್ನ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಲೋಕಸಭಾ ಚುನಾವಣೆಯನ್ನು ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಎದುರಿಸಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ ಬೆನ್ನಲ್ಲೇ ಎಎಪಿ ಈ ನಿರ್ಧಾರ ಪ್ರಕಟಿಸಿದೆ.