ಬಿಜೆಪಿ ಸೇರ್ಪಡೆ ಬಗ್ಗೆ ಲಕ್ಷ್ಮಣ ಸವದಿ ಹೇಳಿದ್ದೇನು ?

Prasthutha|

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಲಕ್ಷ್ಮಣ ಸವದಿ ಅವರು ಸಹ ಬಿಜೆಪಿಗೆ ವಾಪಸ್ ಆಗುತ್ತಾರಾ ಎನ್ನುವ ಚರ್ಚೆಗಳು ನಡೆದಿದ್ದು, ಈ ಬಗ್ಗೆ ಸ್ವತಃ ಲಕ್ಷ್ಮಣ ಸವಧಿ ಪ್ರತಿಕ್ರಿಯಿಸಿದ್ದಾರೆ.

- Advertisement -

ಮತ್ತೆ ಬಿಜೆಪಿ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ. ಯಾವುದೇ ಕಾರಣಕ್ಕೂ ನಾನು ಮತ್ತೆ ಬಿಜೆಪಿಗೆ ಹೋಗಲ್ಲ. ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಹೋಗಿದ್ದು ಏಕೆಂದು ಗೊತ್ತಿಲ್ಲ. ಶೆಟ್ಟರ್ ಬಿಜೆಪಿಗೆ ಹೋಗಿದ್ದರಿಂದ ಕಾಂಗ್ರೆಸ್ ಗೆ ಡ್ಯಾಮೇಜ್ ಆಗಲ್ಲ. ರಾಷ್ಟ್ರೀಯ ಪಕ್ಷಗಳು ಎಂದೂ ಒಬ್ಬರ ಮೇಲೆ ಅವಲಂಬಿತವಾಗಿರಲ್ಲ. ಶೆಟ್ಟರ್ ರಾಜೀನಾಮೆ ನೀಡಿದ್ದು ವೈಯಕ್ತಿಕ, ಈ ಬಗ್ಗೆ ಮಾತನಾಡಲ್ಲ ಎಂದು ಸ್ಪಷ್ಟಪಡಿಸಿದರು.


ನಾನು ಅವರು ಕಾಂಗ್ರೆಸ್ ಬರುವಾಗ ಒಟ್ಟಿಗೆ ನಿರ್ಧಾರ ಮಾಡಿರಲಿಲ್ಲ. ನಾನು ಮೊದಲು ಕಾಂಗ್ರೆಸ್ ಸೇರ್ಪಡೆಯಾಗಿದ್ದು. ಆಮೇಲೆ ಅವರು ಕಾಂಗ್ರೆಸ್ ಗೆ ಬಂದಿದ್ದಾರೆ. ಶೆಟ್ಟರ್ ಯಾಕೆ ಬಿಜೆಪಿಗೆ ಹೋದ್ರು ಅಂತ ಅವರನ್ನೇ ಕೇಳಬೇಕು ಎಂದು ಹೇಳಿದರು.



Join Whatsapp