ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ ನಿಂದ ಕಲೆಕ್ಷನ್: ಹೆಚ್​ ಡಿ ಕುಮಾರಸ್ವಾಮಿ

Prasthutha|

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ‘ಬೆಂಗಳೂರು ನಗದಾಭಿವೃದಿ ಇಲಾಖೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

- Advertisement -

ಜೊತೆಗೆ ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನಿಸಿ “ಎಕ್ಸ್’” ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ‘ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ.

ಬೆಂಗಳೂರು ನಗದಾಭಿವೃದ್ಧಿ’ ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

- Advertisement -

ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಪ್ರಕ್ರಿಯೆ ನಿರಾತಂಕವಾಗಿ ನಡೆಯುತ್ತಿದೆ. ಅದಕ್ಕೂ ಮುನ್ನ ಉನ್ನತಮಟ್ಟದ ಹೂಡಿಕೆ ಅನುಮೋದನೆ ಸಮಿತಿ ಒಪ್ಪಿಗೆಯನ್ನೂ ಕೊಡುತ್ತದೆ. ಇಷ್ಟೆಲ್ಲ ಇದ್ದ ಮೇಲೆ ಇಲ್ಲಿ BDA ಕೆಲಸ ಏನು? ಯಾರ ಕಿಸೆ ಭರ್ತಿ ಮಾಡಲಿಕ್ಕೆ BDA ಇಂಥ ಅಡ್ಡದಾರಿ ತುಳಿದಿದೆ? ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.



Join Whatsapp