ಬಿಜೆಪಿ ಸಂಸದ ಪರ ಶಾಮನೂರು ಹೇಳಿಕೆ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದ ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಗೆಲ್ಲಬೇಕು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -


ಶಾಮನೂರು ಹೇಳಿಕೆಗೆ ತಿರುಗೇಟು ನೀಡಿದ ಅವರು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದ್ದಾರೆ.


ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ನಾಮ ಮಾಡಬೇಕು ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ನಿರ್ನಾಮ ಮಾಡಲು ಶೆಟ್ಟರ್ ಕರೆ ನೀಡಿದ್ದರು. ಇದೇ ಶೆಟ್ಟರ್ ಬಿಜೆಪಿ ನಿರ್ಮಾಮ ಮಾಡಿ ಎಂದು ಕರೆ ನೀಡಿದ್ದರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.



Join Whatsapp