ಚೆನ್ನೈ: ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೇ ನಮ್ಮ ಗುರಿಯಾಗಿರಬೇಕು. ಅದಕ್ಕಾಗಿ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಕರೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಸ್ಟಾಲಿನ್, ಈ ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಬಿಡಬಾರದು ಎಂಬ ಒಂದೇ ಗುರಿಯನ್ನು ಎಲ್ಲರೂ ಹೊಂದಿರಬೇಕು. ಬಿಜೆಪಿ ವಿರುದ್ಧದ ಮತಗಳು ಯಾವುದೇ ಕಾರಣಕ್ಕೂ ವಿಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ಕರೆ ಕೊಟ್ಟಿದ್ದಾರೆ.
ಪ್ರತಿಯೊಬ್ಬರಿಗೂ ಒಂದೇ ಗುರಿ ಇರಬೇಕು. ಅದು ಈ ದೇಶದಲ್ಲಿ ಮತ್ತೆ ಬಿಜೆಪಿಯನ್ನ ಅಧಿಕಾರಕ್ಕೆ ಬರಲು ಬಿಡಬಾರದು. ಒಂದು ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಇರುವುದಿಲ್ಲ ಎಂದು ಎಚ್ಚರಿಸಿದರು.