ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (BDA) ನೂತನ ಅಧ್ಯಕ್ಷರಾಗಿ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷರ ಮೊದಲ ಪಟ್ಟಿಯಲ್ಲಿ ಹ್ಯಾರೀಸ್ ಆಯ್ಕೆ ಆದರು. ಒಟ್ಟು 36 ಶಾಸಕರಿಗೆ ವಿವಿಧ ನಿಗಮ-ಮಂಡಳಿಗಳಲ್ಲಿ ಸ್ಥಾನ ಸಿಕ್ಕಿದ್ದು ಬಿಡಿಎ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಬಿಡಿಎ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಶಾಸಕ ಜಮೀರ್ ಅಹ್ಮದ್ ಕೂಡ ಕಚೇರಿಗೆ ಆಗಮಿಸಿ ಶುಭ ಕೋರಿದರು.