ಬೆಂಗಳೂರು: ಪ್ರಧಾನಿ ಮೋದಿಯವರ ಕೆಲಸಗಳನ್ನು ನೋಡಿ ನಾನು ಬಿಜೆಪಿಗೆ ಬೆಂಬಲ ಕೊಟ್ಟಿದ್ದೇನೆ. ಜೆಪಿಯವರಿಗೆ ನನ್ನ ಬೆಂಬಲ ಈಗಲೂ ಇದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ತಿಳಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾದ ಮೇಲೆ ಯಾರ ಜೊತೆಗೂ ಚರ್ಚಿಸಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ನನಗೆ ಫೋನ್ ಮಾಡಿದ್ದರು. ಮಾತನಾಡಲು ಬರುತ್ತೇನೆ ಎಂದು ಅವರು ಹೇಳಿದ್ದರು. ಆದರೆ, ನಾಳೆಯಿಂದ ಸಂಸತ್ನಲ್ಲಿ ಅಧಿವೇಶನ ನಡೆಯಲಿದೆ. ಹೀಗಾಗಿ ಬುಧವಾರ ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂದು ಸುಮಲತಾ ಹೇಳಿದ್ದಾರೆ.
ಬಿಜೆಪಿಯಲ್ಲಿ ಕೂಡ ಮಂಡ್ಯ ಬಿಟ್ಟು ಬೇರೆ ಕಡೆ ಟಿಕೆಟ್ ಕೊಟ್ಟರೆ ಸ್ಪರ್ಧಿಸಲು ನನಗೆ ಅಸಕ್ತಿ ಇಲ್ಲ ಎಂದರು.