ನವದೆಹಲಿ: ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯದ ‘ಭಾರತ: ಪ್ರಜಾಪ್ರಭುತ್ವದ ತಾಯಿ’ ಪರಿಕಲ್ಪನೆಯ ಸ್ತಬ್ಧಚಿತ್ರವು ಮೊದಲ ಬಹುಮಾನ ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ತಬ್ಧಚಿತ್ರವು ಸಂಪ್ರದಾಯ ಮತ್ತು ನಾವೀನ್ಯತೆಯನ್ನು ಬೆಸೆದಿದೆ. ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಅತ್ಯುತ್ತಮ ರೀತಿಯಲ್ಲಿ ಪ್ರದರ್ಶಿಸಿದ್ದು ಪ್ರೇಕ್ಷಕರನ್ನು ಆಕರ್ಷಿಸಿದೆ. ಭಾರತ ಪ್ರಜಾಪ್ರಭುತ್ವದ ತಾಯಿ ಎಂಬ ವಿಷಯವನ್ನು ಶ್ಲಾಘಿಸಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.