►ಫೆಬ್ರವರಿ ಮೊದಲ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ
ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಪೊಲೀಸ್ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಈ ಸಂಬಂಧ ಮಲ್ಪೆ ಪೊಲೀಸರು ಫೆಬ್ರವರಿ ಮೊದಲ ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ನ.12ರಂದು ಭಾನುವಾರ ಉಡುಪಿ ಸಮೀಪದ ನೇಜಾರು ಬಳಿಯ ತೃಪ್ತಿ ಲೇಜೌಟ್ ನಲ್ಲಿ ಹಸೀನಾ ಹಾಗೂ ಅವರ ಮೂವರು ಮಕ್ಕಳಾದ ಅಫ್ನಾನ್ (23), ಅಯ್ನಾಝ್ (21), ಆಸೀಮ್ ನ್ನು (12) ಬರ್ಬರವಾಗಿ ಇರಿದು ಹತ್ಯೆ ಮಾಡಲಾಗಿತ್ತು. ಈ ಘಟನೆ ರಾಜ್ಯದಲ್ಲಿ ಭಾರೀ ತಲ್ಲಣಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಬಂಧಿಸಲಾಗಿತ್ತು. ಆರೋಪಿಯನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದ.