ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ತಮಿಳುನಾಡು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದರು.
ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಪೌರತ್ವ ತಿದ್ದುಪಡಿ ಮಸೂದೆ ಪರ ಮತ ಚಲಾಯಿಸಿದ್ದ ಎಐಎಡಿಎಂಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಪೌರತ್ವ ತಿದ್ದುಪಡಿ ಮಸೂದೆಗೆ ಆ ಪಕ್ಷ(ಎಐಎಡಿಎಂಕೆ) ಬೆಂಬಲ ನೀಡದಿದ್ದರೆ ಅದು ಕಾನೂನಾಗದೇ ಇರಲು ಸಾಧ್ಯವಿತ್ತು. ಈ ಮಸೂದೆಯಿಂದ ಶ್ರೀಲಂಕಾದ ತಮಿಳು ನಿರಾಶ್ರಿತರು ಮತ್ತು ಮುಸ್ಲಿಮರಿಗೆ ಅನ್ಯಾಯವಾಗುತ್ತದೆ’ ಎಂದು ಹೇಳಿದರು.