ನವದೆಹಲಿ: ಸುಮಾರು 40 ಸಾವಿರ ಬೋಗಿಗಳನ್ನು ವಂದೇ ಭಾರತ್ ರೈಲಿನ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.
ಕೇಂದ್ರ ಮಧ್ಯಂತರ ಬಜೆಟ್ ಮಂಡನೆ ಮಾಡಿದ ಅವರು, ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲ ವೃದ್ಧಿಸುವುದಕ್ಕಾಗಿ ಸಾಮಾನ್ಯ ಕೋಚ್ಗಳನ್ನು ವಂದೇ ಭಾರತ್ ಗುಣಮಟ್ಟಕ್ಕೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಹೊಸ ಹಣಕಾಸು ವರ್ಷಕ್ಕೆ ರೈಲ್ವೆ ಇಲಾಖೆಗೆ 2.55 ಲಕ್ಷ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.
ರೈಲ್ವೆ ಇಲಾಖೆಗೆ ಇಂಧನ, ಖನಿಜ, ಸಿಮೆಂಟ್ ಕಾರಿಡಾರ್, ಬಂದರು ಸಂಪರ್ಕ ಕಾರಿಡಾರ್ ಮತ್ತು ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್ ಅನ್ನು ಹಣಕಾಸು ಸಚಿವರು ಘೋಷಣೆ ಮಾಡಿದ್ದಾರೆ.