ಜನರ ನೋವನ್ನು ಡಿಕೆ ಸುರೇಶ್ ಹೇಳಿದ್ದಾರೆ: ಸಿದ್ದರಾಮಯ್ಯ, ಡಿಕೆಶಿ

Prasthutha|

ಬೆಂಗಳೂರು: ಸಂಸದ ಸುರೇಶ್ ಅವರು ಜನರ ಬೇಸರ ಹಾಗೂ ಅಭಿಪ್ರಾಯವನ್ನು ಹೇಳಿದ್ದಾರೆ. ನಮಗಾಗುತ್ತಿರುವ ಅನ್ಯಾಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು‌. ದೇಶದ ಸಾರ್ವಭೌಮತೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಸಂಸದ ಡಿ.ಕೆ. ಸುರೇಶ್‌ ಅವರು ದೆಹಲಿಯಲ್ಲಿ ನೀಡಿದ್ದ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸಿಎಂ ಹೀಗೆ ಪ್ರತಿಕ್ರಿಯಿಸಿದ್ದಾರೆ. ನಮ್ಮದು ಒಕ್ಕೂಟ ವ್ಯವಸ್ಥೆ. ರಾಜ್ಯಗಳ ಪಾಲನ್ನು ಕೇಂದ್ರ ಸರ್ಕಾರ ಚಾಚೂ ತಪ್ಪದೆ ಕೊಡಬೇಕು. ಆದರೆ, ಕೊಡುತ್ತಿಲ್ಲ. ಈ ಹಿನ್ನೆಯಲ್ಲಿ ಸುರೇಶ್ ಮಾತನಾಡಿದ್ದಾರೆ ಎಂದು ಸಿಎಂ ಹೇಳಿದರು.

ನಮ್ಮಿಂದ ₹ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದೂ ಸಿಎಂ ದೂರಿದರು.

- Advertisement -

ಸಹೋದರನ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ನಾನು ಅಖಂಡ ಭಾರತದ ಪ್ರಜೆ. ಸುರೇಶ್ ಅವರು ಸಹಜವಾಗಿ ಜನರ ಬೇಸರ ಹಾಗೂ ಅಭಿಪ್ರಾಯವನ್ನು ಪ್ರತಿನಿಧಿಸಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

ನಾವೆಲ್ಲರೂ ಭಾರತ ಮಾತೆಯ ಮಕ್ಕಳು, ನಾವು ಒಗ್ಗಟ್ಟಾಗಿರಬೇಕು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಒಂದೇ. ಹಿಂದಿ ಭಾಗಕ್ಕೆ ಹೇಗೆ ಆದ್ಯತೆ ನೀಡಲಾಗುತ್ತಿದೆಯೋ ಅದೇ ರೀತಿ ನಮಗೂ ಆದ್ಯತೆ ನೀಡಬೇಕು ಎಂದು ಡಿಕೆ ಶಿವಕುಮಾರ್ ಪ್ರತಿಪಾದಿಸಿದ್ದಾರೆ.



Join Whatsapp