ಬೆಂಗಳೂರು: ಬಿಎಂಟಿಸಿ ಬಸ್ಸೊಂದು ಬೈಕ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಂಗಳೂರಿನ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಯುವತಿ ಕುಸುಮಿತಾ (21) ಇಂದು ಬೆಳಗ್ಗೆ 8.30ಕ್ಕೆ ಕಾಲೇಜಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಕೂಡಲೇ ಅವರನ್ನು ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.