ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸೊರೇನ್ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂ.ಎಂ.ಸುಂದರೇಶ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು.
ಸೊರೇನ್ ಪರ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರಿಗೆ, ನಾವು ಮಧ್ಯಪ್ರವೇಶಿಸುವುದಿಲ್ಲ. ಹೈಕೋರ್ಟಿಗೆ ತೆರಳಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.