ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ಏಕರೂಪದ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಆದೇಶ

Prasthutha|

ಬೆಂಗಳೂರು: ರಾಜ್ಯಾದ್ಯಂತ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್ಸ್ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಸಾಗಾಣಿಕೆ ದರಗಳನ್ನು ಏಕರೂಪಗೊಳಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

- Advertisement -

ಸಿಟಿ ಟ್ಯಾಕ್ಸಿಯಲ್ಲಿ ಹಗಲು ದರೋಡೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಸಾರಿಗೆ ಇಲಾಖೆಯ ಆದೇಶದಲ್ಲಿ ಏನಿದೆ?

- Advertisement -

1) 10 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 100 ರೂ. ನಿಗದಿ
2) 4 ಕಿಮೀ ನಂತರ ಪ್ರತಿ ಕಿಮೀಗೆ ಹೆಚ್ಚುವರಿ 24 ರೂ.ನಿಗದಿ
3) 10 ಲಕ್ಷದಿಂದ 15 ಲಕ್ಷ ರೂ.ವರೆಗಿನ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 115 ರೂ. ನಿಗದಿ
4)4 ಕಿಮೀ ನಂತರ ಪ್ರತಿ ಕಿಲೋ ಮೀಟರ್‌ಗೆ ಹೆಚ್ಚುವರಿ 32 ರೂ. ನಿಗದಿ

5 )4 ಕಿಮೀ ನಂತರ ಪ್ರತಿ 1 ಕಿಮೀಗೆ ಹೆಚ್ಚುವರಿ 28 ರೂ. ನಿಗದಿ
6) 15 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 130 ರೂ. ನಿಗದಿ

ಹೊಸ ನಿಯಮಗಳೇನು?
1) ವೈಯಕ್ತಿಕ ಲಗೇಜುಗಳಿಗೆ 120 ಕೆಜಿ ವರೆಗೆ ವಿನಾಯಿತಿ
2) ಮೊದಲ 5 ನಿಮಿಷ ಕಾಯುವಿಕೆಗೆ ಶುಲ್ಕ ಇಲ್ಲ
3) ಪ್ರಯಾಣಿಕರಿಂದ ಜಿಎಸ್ಟಿ, ಟೋಲ್ ವಸೂಲಿಗೆ ಅವಕಾಶ
4) ಬೆಳಗ್ಗಿನ ಜಾವ 6 ಗಂಟೆ ವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ 10% ಹೆಚ್ಚುವರಿ ದರ ವಿಧಿಸಲು ಅವಕಾಶ.



Join Whatsapp