ಬೆಂಗಳೂರು: ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ (43) ಅವರ ಕೊಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, ಆರೋಪಿ ಕಿರಣ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ನಗರದ 2ನೇ ಎಸಿಎಂಎಂ ನ್ಯಾಯಾಲಯಕ್ಕೆ 600 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ.
ಆರೋಪಿ ಕಿರಣ್ ನೀಡಿದ್ದ ಸ್ವಇಚ್ಛಾ ಹೇಳಿಕೆ, 70 ಮಂದಿ ಸಾಕ್ಷಿದಾರರ ಹೇಳಿಕೆ, ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿ, ಸಾಂದರ್ಭಿಕ ಸಾಕ್ಷ್ಯ, ಡಿಜಿಟಲ್ ಸಾಕ್ಷ್ಯಾಧಾರ ಸಹಿತ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೊಡ್ಡಕಲ್ಲಸಂದ್ರದ ಕುವೆಂಪು ನಗರದ ಪ್ರತಿಮಾ ಅವರ ನಿವಾಸಕ್ಕೆ ನ.4ರಂದು ರಾತ್ರಿ ನುಗ್ಗಿದ್ದ ಆರೋಪಿ, ಕೊಲೆ ಮಾಡಿ ಪರಾರಿಯಾಗಿದ್ದ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.