ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್

Prasthutha|

ಸುರತ್ಕಲ್: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಕಚೇರಿಯನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಿದರು.

- Advertisement -


ಬಳಿಕ ಮಾತನಾಡಿದ ಕೆ.ಜೆ. ಜಾರ್ಜ್, ಸಾಮಾನ್ಯ ಕಾರ್ಯಕರ್ತರು ಮನಸು ಮಾಡಿದರೆ ಟಿ.ಎಂ.ಪೈ ಅವರನ್ನೇ ಸೋಲಿಸಿರುವ ನಿದರ್ಶನ ಇರುವಾಗ ನಳಿನ್ ಕುಮಾರ್ ಅವರನ್ನು ಸೋಲಿಸುವುದು ದೊಡ್ಡ ವಿಚಾರವೇ ಅಲ್ಲ. ದ.ಕ. ಜಿಲ್ಲೆ ಕಾಂಗ್ರೆಸ್ ಪಕ್ಷದ ಕೋಟೆಯಾಗಿತ್ತು. ಎಲ್ಲರೂ ಒಗ್ಗಟ್ಟು ಪ್ರದರ್ಶಿದರೆ ಮತ್ತೆ ನಮ್ಮ ಕೋಟೆಯನ್ನು ಹಿಂಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್, ಮಾಜಿ ಸಚಿವರಾದ ಶ್ರೀ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಶ್ರೀ ಜೆ.ಆರ್. ಲೋಬೋ, ಶ್ರೀ ಐವನ್ ಡಿಸೋಜಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶ್ರೀ ಪುರುಷೋತ್ತಮ ಚಿತ್ರಾಪುರ, ಸುರೇಂದ್ರ ಕಂಬಳಿ ಹಾಗೂ ಜಿಲ್ಲಾ, ಬ್ಲಾಕ್ ಮಟ್ಟದ ಪದಾಧಿಕಾರಿಗಳು, ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.



Join Whatsapp