ನವದೆಹಲಿ: ಅಂಧ ಭಕ್ತರು ಹೆಚ್ಚಿರುವ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ದಕ್ಷಿಣ ಭಾರತದವರು ಅಂಧ ಭಕ್ತರು ಅಲ್ಲ ಎನ್ನುವ ಕಾರಣಕ್ಕೆ ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಡಿ.ಕೆ ಸುರೇಶ್ ಹೇಳಿಕೆ ಬಹಳಷ್ಟು ಚರ್ಚೆಯಾಗುತ್ತಿದೆ. ತೆರಿಗೆ ರೂಪದಲ್ಲಿ ಬರುವ ಹಣ ಹೇಗೆ ವಿಕೇಂದ್ರಿಕರಣಗೊಳ್ಳಬೇಕು ಎಂದು ಫೈನಾನ್ಸ್ ಕಮಿಷನ್ ನಿರ್ಧರಿಸುತ್ತದೆ. ಈಶಾನ್ಯ ರಾಜ್ಯಗಳಿಗೆ ಅನುದಾನದ ಕೊರತೆ ಇದೆ. ಅವರಿಗೆ ಆರ್ಥಿಕ ಸಹಾಯ ಮಾಡುವುದು ನ್ಯಾಯ ಆದರೆ ಉತ್ತರ ಭಾರತದ ಕೆಲವು ರಾಜ್ಯಗಳು ರೋಗಗ್ರಸ್ಥ ರಾಜ್ಯಗಳು ಉತ್ಪಾದನೆ, ಉದ್ಯೋಗ ಸೃಷ್ಟಿ ಮಾಡಿದ್ದರೆ ಈ ರೀತಿಯ ಸಮಸ್ಯೆ ಬರುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುರೇಶ್ ಮಾತನಾಡಿದ್ದಾರೆ. ಅದನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.