‘ಪ್ರಧಾನಿ ಗ್ಯಾರಂಟಿ’ ನಮ್ಮ ಗ್ಯಾರಂಟಿಯ ನಕಲು: ಲಕ್ಷ್ಮಿ ಹೆಬ್ಬಾಳ್ಕರ್

Prasthutha|

ಬೆಳಗಾವಿ: ರಾಜ್ಯದಲ್ಲಿ ನಾವು ಆಶ್ವಾಸನೆ ನೀಡಿದಂತೆ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿದ್ದೇವೆ. ಈಗ ದೊಡ್ಡ ಹೋಡಿಂಗ್ ಗಳಲ್ಲಿ ‘ಪ್ರಧಾನಿ ಗ್ಯಾರಂಟಿ’ ಎಂದು ಬಿಂಬಿಸಲಾಗುತ್ತಿದೆ. ಇದು ನಮ್ಮ ಗ್ಯಾರಂಟಿಯ ನಕಲು’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ನಮಗೆ ಪದೇಪದೆ ಅನ್ಯಾಯವಾಗಿದೆ. ರಾಜ್ಯಕ್ಕೆ ಸಮರ್ಪಕವಾಗಿ ಅನುದಾನ ಸಿಗುತ್ತಿಲ್ಲ. ಬರ ಪರಿಸ್ಥಿತಿಯಲ್ಲಿ ಕೇಂದ್ರ ಸಹಾಯಕ್ಕೆ ಬರಲಿಲ್ಲ. ಹಾಗಾಗಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಯೇ ಇದಕ್ಕೆ ಅಸ್ತ್ರ. ದೆಹಲಿಯಲ್ಲಿ ಫೆ.7ರಂದು ಪ್ರತಿಭಟನೆ ನಡೆಯುತ್ತಿದ್ದು, ಜಿಲ್ಲೆಯಲ್ಲಿರುವ ಕಾಂಗ್ರೆಸ್ನ 11 ಶಾಸಕರು ಮತ್ತು ಇಬ್ಬರು ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದೇವೆ’ ಎಂದರು.



Join Whatsapp