ಮಂಡ್ಯ: ಕೆರಗೋಡು ಹನುಮ ಧ್ವಜ ತೆರವು ವಿವಾದ ಸಂಬಂಧ ಜಿಲ್ಲಾಧಿಕಾರಿ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪರಿಣಾಮ, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್ ಅನ್ನು ಮಾಡದಿರಲು ನಿರ್ಧರಿಸಲಾಗಿದೆ.
ಕೆರಗೋಡು ಹನುಮ ಧ್ವಜ ತೆರವು ವಿರೋಧಿಸಿ ಫೆ.9ಕ್ಕೆ ಭಜರಂಗದಳ ಬಂದ್ ಗೆ ಕರೆ ಕೊಟ್ಟಿದೆ. ಮತ್ತೊಂದೆಡೆ ಭಜರಂಗದಳ ಬಂದ್ ಕರೆ ವಿರೋಧಿಸಿ ಫೆ.7 ಕ್ಕೆ ಸಮಾನ ಮನಸ್ಕರ ವೇದಿಕೆ ಬಂದ್ ಗೆ ಕರೆ ಕೊಟ್ಟಿತ್ತು. ಸಮಾನ ಮನಸ್ಕರ ವೇದಿಕೆಗೆ ದಲಿತ ಪರ ಸಂಘಟನೆ, ಪ್ರಗತಿಪರರು, ಸಿಐಟಿಯು ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿದ್ದರು. ಆದರೆ ಇದೀಗ ಜಿಲ್ಲಾಡಳಿತ ಮನವಿ ಮೇರೆಗೆ ಸಮಾನ ಮನಸ್ಕರ ವೇದಿಕೆ ಬಂದ್ ಹಿಂಪಡೆದಿದೆ.