ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲೂ ರೈತರ ಸಾಲಮನ್ನಾ ಮಾಡಬೇಕು. ತಮಿಳುನಾಡಿಗೆ ನೀರು ಹರಿಸಿದ್ದರಿಂದ ಕಾವೇರಿ ವ್ಯಾಪ್ತಿಯಲ್ಲಿ ಬೆಳೆನಾಶವಾಗಿದೆ. ಹೀಗಾಗಿ ರೈತರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡಬೇಕು. ಬಗರ್ ಹುಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ನೀಡುವುದು ಸೇರಿ ಹಲವು ಬೇಡಿಕೆಗಳನ್ನು ಮುಂದಿನ ಬಜೆಟ್ನಲ್ಲೇ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.