ಬಿಜೆಪಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ: ಕಾರ್ಯಕರ್ತರು ಪೊಲೀಸ್ ವಶಕ್ಕೆ

Prasthutha|

ಬೆಂಗಳೂರು: ಅನುದಾನ ತಾರತಮ್ಯದಲ್ಲಿ ನಮಗೆ ಅನ್ಯಾಯ ಆಗುತ್ತಿದೆ ಎಂದು ಇಂದು ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಬೃಹತ್ ಹೋರಾಟವನ್ನೇ ನಡೆಸಿದೆ. ಇತ್ತ ನಗರದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಕೂಡ ಪ್ರತಿಭಟನೆ ಮಾಡಿದರೆ, ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ ಮಾಡಿದೆ.

- Advertisement -


ಬ್ಯಾರಿಕೇಡ್ ಅಳವಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ಪ್ರವೇಶಿಸದಂತೆ ತಡೆಯಲಾಗಿದ್ದು, ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ವಿರೋಧ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರತ್ತ ನುಗ್ಗಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದು ಈ ವೇಳೆ ಪೊಲೀಸರು ತಡೆದರು.



Join Whatsapp