ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಬಾಬಾ ಸಿದ್ದಿಕಿ ಅವರು ಗುರುವಾರ (8 ಫೆಬ್ರವರಿ) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ಭಾರಿ ಹಿನ್ನಡೆಯಾಗಿದೆ.
ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಮತ್ತು ಇದು 48 ವರ್ಷಗಳ ಸುದೀರ್ಘ ಪ್ರಯಾಣವಾಗಿದೆ. ಇಂದು ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.