ವಿಟ್ಲ: ಬ್ಯಾಂಕ್ ನೊಳಗೆ ನುಗ್ಗಿದ ಕಳ್ಳರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ.
ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು, ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಸುಮಾರು 20 ವರ್ಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಕಾರ್ಯಾಚರಿಸುತ್ತಿದ್ದು, ಬ್ಯಾಂಕ್ ನ ಸುತ್ತಲೂ ಗಿಡಗಂಟಿ, ಪೊದೆಗಳು ಆವರಿಸಿವೆ.