ಒಡಿಶಾ: ಪ್ರಧಾನಿ ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ, ಜನರನ್ನು ನಂಬಿಸುತ್ತಿದ್ದಾರೆ ಅಷ್ಟೇ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಒಡಿಶಾದಲ್ಲಿ ಮೂರನೇ ದಿನ ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ. ಅವರು ಗುಜರಾತ್ ನಲ್ಲಿ ‘ತೇಲಿ’ ಜಾತಿಯಲ್ಲಿ ಜನಿಸಿದರು. 2000 ರಲ್ಲಿ ತೇಲಿ ಸಮುದಾಯಕ್ಕೆ ಬಿಜೆಪಿಯಿಂದ ಒಬಿಸಿ ಟ್ಯಾಗ್ ನೀಡಲಾಯಿತು. ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ. ಇದೇ ಕಾರಣಕ್ಕೆ ತಮ್ಮ ಇಡೀ ಜೀವನದಲ್ಲಿ ಜಾತಿ ಗಣತಿ ನಡೆಸಲು ಬಿಡುವುದಿಲ್ಲ’ ಎಂದಿದ್ದಾರೆ.