ಮಂಗಳೂರು: ನಾವು ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎನ್ನುತ್ತಿದ್ದೇವೆ ಆದರೆ ಹರೀಶ್ ಪೂಂಜಾ ಉದ್ದೇಶವೇ ಬೇರೆ ಇದೆ. ರಾಜ್ಯಕ್ಕೆ ಅನ್ಯಾಯ ಆಗುತ್ತಿರುವ ಸತ್ಯಾಂಶವನ್ನ ಅವರು ಒಪ್ಪಿಕೊಳ್ಳಬೇಕು. ಅದನ್ನು ಒಪ್ಪಿಕೊಳ್ಳದೇ ಮೊಂಡುವಾದ ಪ್ರದರ್ಶನ ಮಾಡಿದ್ರೆ ಏನ್ ಹೇಳೋದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬಿಜೆಪಿ ಶಾಸಕ ಹರೀಶ್ ಪೂಂಜಾ `ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು’ ಅಭಿಯಾನಕ್ಕೆ ಕರೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಕ್ಕೆ ಬರುವ ತೆರಿಗೆ ಪ್ರಮಾಣದಲ್ಲಿ ಯಾವುದೇ ವೃದ್ಧಿಯಾಗಿಲ್ಲ. ಈ ವಿಚಾರ ಪೂಂಜಾ ಮಾತನಾಡಬೇಕು. ಇದರಲ್ಲೂ ಅವರು ಜನರನ್ನು ಒಡೆಯಲು ಹೊರಟಿರುವುದು ದುರ್ದೈವದ ವಿಚಾರ. ಇವರದ್ದೆಲ್ಲಾ ಇದೇ ಕುತಂತ್ರ, ಧರ್ಮದ ಹೆಸರಿನಲ್ಲಿ ಅನ್ಯಾಯದ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.