ದೆಹಲಿ: ಪಂಜಾಬ್ ನ ಎಲ್ಲಾ 13 ಲೋಕಸಭಾ ಸ್ಥಾನಗಳಿಗೆ ತಮ್ಮ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಲಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.
ಈ ಕುರಿತು ಮಾಹಿತಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಂದಿನ ಎರಡು ವಾರದೊಳಗೆ ಪಂಜಾಬ್ ಹಾಗೂ ಚಂಡೀಗಢ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿಯ ಹೇಳಿಕೆಯು ವಿರೋಧ ಪಕ್ಷದ ಗುಂಪಿನಲ್ಲಿ ಗೊಂದಲವನ್ನು ಹೆಚ್ಚಿಸಲಿದೆ, ಈಗಾಗಲೇ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಪಕ್ಷವು ಪಶ್ಚಿಮ ಬಂಗಾಳದಲ್ಲಿ ತನ್ನ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಇತ್ತ ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಕಳೆದ ತಿಂಗಳು ಬಿಜೆಪಿ ನೇತೃತ್ವದ ಎನ್ ಡಿಎಗೆ ಬದಲಾದರು.