ರಾಜ್ಯದಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

Prasthutha|

ಬೆಂಗಳೂರು: ಆರು ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಾಗಿದೆ, ಈ ನಿಯಮವನ್ನು ಪಾಲಿಸಬೇಕು ಎಂದು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

- Advertisement -

ಹಲವು ಪೋಷಕರು, ಮಕ್ಕಳನ್ನು ಹೆಲ್ಮೆಟ್ ಇಲ್ಲದೇ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾರೆ. ಇಂಥ ಪೋಷಕರಿಗೆ ಪೊಲೀಸರು, ‘6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಿದೆ. ಇಂದಿನಿಂದಲೇ ಮಕ್ಕಳಿಗೆ ಹೆಲ್ಮೆಟ್ ಹಾಕಿಸಿ’ ಎಂದು ಸೂಚನೆ ನೀಡುತ್ತಿದ್ದಾರೆ.

ಶಾಲೆ-ಕಾಲೇಜು ಬಳಿ ಹೆಲ್ಮೆಟ್ ರಹಿತ ಚಾಲನೆ, ಪರವಾನಗಿ ಇಲ್ಲದೇ ಚಾಲನೆ, ಪಾದಚಾರಿ ಮಾರ್ಗದಲ್ಲಿ ಸವಾರಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪೊಲೀಸರು ಪ್ರಕರಣಗಳನ್ನೂ ದಾಖಲಿಸಿ, ದಂಡ ವಸೂಲಿ ಮಾಡುತ್ತಿದ್ದಾರೆ.

- Advertisement -

6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಎಂಬುದು ಹೊಸ ನಿಯಮವಲ್ಲ. ಕಾಯ್ದೆಯಲ್ಲಿ ಮೊದಲಿನಿಂದಲೂ ಇದೆ. ಆದರೆ, ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ’ ಎಂದು ಸಂಚಾರ ವಿಭಾಗದ ಅಧಿಕಾರಿಯೊಬ್ಬರು ಹೇಳಿದದ್ದಾರೆ.



Join Whatsapp