ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್

Prasthutha|

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ದಾಖಲಾದ ಪ್ರಕರಣದಲ್ಲಿ ಕೋರ್ಟ್‌ಗೆ ನಿರಂತರವಾಗಿ ಗೈರಾಗಿದ್ದರ ಹಿನ್ನಲೆಯಲ್ಲಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ.

- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೇ ಪಾದಯಾತ್ರೆ ಮಾಡಿದ್ದಂತ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು.

ಇದೇ ರೀತಿಯಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧವೂ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅವರು ಹಾಜರಾಗದೇ ನಿರಂತರವಾಗಿ ಗೈರಾಗಿದ್ದರು. ಪೊಲೀಸರ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಬಳಿಕ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿತ್ತು. ಆದರೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೋರ್ಟ್ ವಿಚಾರಣೆ ಹಾಜರಾಗಿರಲಿಲ್ಲ.

- Advertisement -

ಈ ಹಿನ್ನಲೆಯಲ್ಲಿ ರಾಮಲಿಂಗಾರೆಡ್ಡಿ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ಜೆ.ಪ್ರೀತಂ ಅವರು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದ್ದಾರೆ.



Join Whatsapp